ಇದೀಗ ಬಂದ ಸುದ್ದಿ: ದೋಸ್ತಿ ಸರ್ಕಾರಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ವಾಪಸ್ ಪಡೆದ ಇಬ್ಬರು ಶಾಸಕರು....

ದೋಸ್ತಿ ಸರ್ಕಾರಕ್ಕೆ ಶಾಸಕರ ರಾಜೀನಾಮೆ ಪ್ರಕರಣ ಅಲ್ಪ ಮತಕ್ಕೆ ಕುಸಿಯುವಂತೆ ಮಾಡಿತ್ತು. ಇದೀಗ ಇಂತಹ ಬೆಳವಣಿಗೆಯಿಂದ ಕಾಂಗ್ರೆಸ್ ಅತೃಪ್ತ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಕೆ ಕಸರತ್ತು ನಡೆಸಿತ್ತು. ಇಂತಹ ಕಸರತ್ತಿನಲ್ಲಿ ಯಶಸ್ವಿಯಾಗಿರುವ ದೋಸ್ತಿಗಳು ಶಾಸಕ ರಾಮಲಿಂಗಾರೆಡ್ಡಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ರಾಮಲಿಂಗಾರೆಡ್ಡಿ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ವಾಪಾಸ್ ಪಡೆಯುತ್ತಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ, ತಾವು ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ರಾಜೀನಾಮೆ ವಾಪಾಸ್ ಪಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ರಾಮಲಿಂಗಾರೆಡ್ಡಿ ತಿಳಿಸಿರುವ ಪ್ರಕಟಣೆ ಹೀಗಿದೆ.. ರಾಜ್ಯದ ಬಿಎಸ್ ಪಿ ಶಾಸಕ ಎನ್ ಮಹೇಶ್ ‌ ಕೊನೆಗೂ ಕೂಡ ತಮ್ಮ ನಿಲುವನ್ನು ಪ್ರಕಟಿಸಿದ್ದು, ಸಮ್ಮಿಶ್ರ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಸಮ್ಮಿಶ್ರ ಸರ್ಕಾರದ ಒಂದು ಭಾಗವಾಗಿದ್ದೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರ ಆದೇಶದ ಮೇಲೆ ಸಮ್ಮಿಶ್ರ ಸರ್ಕಾರದ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಬಿಜೆಪಿ ಸೇರಿ 3 ಪಕ್ಷಕ್ಕೂ ನೀವು ಸ್ವತಂತ್ರವಾಗಿರಿ ಎಂದು ಮಾಯಾವತಿ ಅವರು 15 ದಿನಗಳ ಹಿಂದೆಯೇ ಹೇಳಿದ್ದಾರೆ ಎಂದರು.
ನನಗೆ ಪ್ರತ್ಯೇಕ ಆಸನ ಕೊಡುವಂತೆ ಸ್ಪೀಕರ್ ಗೆ ಮನವಿ ಮಾಡಿದ್ದೇನೆ, ಆದರೆ ಸಮ್ಮಿಶ್ರ ಸರ್ಕಾರಕ್ಕೆ ನಾನು ವಿಷಯಾಧಾರಿತ ಬಾಹ್ಯ ಬೆಂಬಲ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.

Comments